- Advertisement -
- Advertisement -
ಮಂಗಳೂರು: ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ.
ಜಾಸಿಮ್ ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ. ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -