Wednesday, July 15, 2026
Homeಕರಾವಳಿವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಸುರತ್ಕಲ್‌: ಇಲ್ಲಿನ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ದುರಂತ ಘಟನೆಯೊಂದು ನಡೆದಿದ್ದು, ಮುಕ್ಕದ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮಹಾಲಕ್ಷ್ಮೀ (20) ಅವರು ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯ ಮೂಲದವರಾದ ಈಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ತಮ್ಮ ಪೋಷಕರೊಂದಿಗೆ ಸುಭಾಷಿತ ನಗರದ ವಸತಿ ಸಮುಚ್ಚಯದಲ್ಲಿ 2ನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಮಂಗಳವಾರ ಪೋಷಕರೊಂದಿಗೆ ಕಟೀಲು ದೇವಸ್ಥಾನಕ್ಕೆ ಹೋಗಿ ಹಿಂದಿರುಗಿದ ಬೆನ್ನಲ್ಲೇ, ಈಕೆ ಏಕಾಏಕಿ 5ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೋಷಕರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!