Sunday, June 28, 2026
Homeಪ್ರಮುಖ-ಸುದ್ದಿಎಂಸಿಸಿ ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

ಎಂಸಿಸಿ ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

- Advertisement -
- Advertisement -

ಮಂಗಳೂರು: ಗ್ರಾಹಕರ ಸರ್ವತೋಮುಖ ಪ್ರಗತಿ ಮತ್ತು ಸಮುದಾಯದ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿಸಿಕೊಂಡು, ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಬಂದಿರುವ ಎಂಸಿಸಿ ಬ್ಯಾಂಕ್‌ನ 22ನೇ ಶಾಖೆಯು ದೇರಳಕಟ್ಟೆಯ ಫಾದರ್ ಮುಲ್ಲರ್ ಕಟ್ಟಡ ಸಂಕೀರ್ಣದಲ್ಲಿ ರವಿವಾರದಂದು ಅತ್ಯಂತ ಯಶಸ್ವಿಯಾಗಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು, ಎಂಸಿಸಿ ಬ್ಯಾಂಕ್ ಇಂದು ಸಾರ್ವಜನಿಕರ ಅಪಾರ ವಿಶ್ವಾಸಕ್ಕೆ ಪಾತ್ರವಾಗಿದೆ ಮತ್ತು ಪ್ರಸ್ತುತ ಆಡಳಿತ ಮಂಡಳಿಯು ಗ್ರಾಹಕರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

ಇದೇ ಸಂದರ್ಭದಲ್ಲಿ ದೇರಳಕಟ್ಟೆಯಲ್ಲಿ ಬ್ಯಾಂಕಿನ 16ನೇ ಎಟಿಎಂ ಕೂಡ ಅಂದು ಉದ್ಘಾಟನೆಗೊಂಡಿದೆ.

ಕೋಟೆಕಾರ್ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ, ಬೆಳ್ಮ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಿ.ಎಂ. ಸತ್ತಾರ್ ಅತಿಥಿಗಳಾಗಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಎಂಸಿಸಿ ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆ್ಯಂಡ್ರೂ ಡಿಸೋಜ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರಾಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಪ್ರಧಾನ ವ್ಯವಸ್ಥಾಪಕ ಸುನೀಲ್ ಮಿನೇಜಸ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!