Friday, September 11, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಗೆ ಶೀಘ್ರ ಮೆಡಿಕಲ್ ಕಾಲೇಜು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ

ಉಡುಪಿ ಜಿಲ್ಲೆಗೆ ಶೀಘ್ರ ಮೆಡಿಕಲ್ ಕಾಲೇಜು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶೀಘ್ರ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ‌. ಕೆ. ಸುಧಾಕರ್ ಭರವಸೆ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಮೆಡಿಕಲ್ ಕಾಲೇಜಿಗೆ ಒತ್ತಡ ಹಾಕುತ್ತಿದ್ದು, ಉಡುಪಿಯಲ್ಲಿ 30 ಎಕರೆ ಜಮೀನು ಕಾಯ್ದಿರಿಸಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳು ಸಿದ್ಧ ಇದ್ದು, ವೈದ್ಯಕೀಯ ಕಾಲೇಜು ಮಾಡುವುದು ಸುಲಭ ಎಂದೂ ಸಚಿವ ಸುಧಾಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿಕ್ರಿಯೆ ನೀಡಿರುವ ಸಚಿವರು, ಸರಕಾರ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು, ರಾಜ್ಯದ 10 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ ಖಾಸಗಿ ಸಹಭಾಗಿತ್ವದಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು, ಕೇಂದ್ರ ಸರ್ಕಾರ ಸೂಚಿಸುವ ಮಾದರಿಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗುತ್ತಿದೆ, ಸಿಎಂ ಕೂಡಾ ರಾಜ್ಯದಲ್ಲಿ ಒಂಬತ್ತರಿಂದ ಹತ್ತು ಮೆಡಿಕಲ್ ಕಾಲೇಜು ಸ್ಥಾಪಿಸಲು ಸೂಚಿಸಿದ್ದಾರೆ ಎಂದು ಉಡುಪಿಯಲ್ಲಿ ಅರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ‌

- Advertisement -

Latest News

error: Content is protected !!