Friday, June 5, 2026
Homeಉದ್ಯಮಬೆಳ್ತಂಗಡಿ: ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರಿಂದ ₹ 3 ಲಕ್ಷ ಮೌಲ್ಯದ ವೈದ್ಯಕೀಯ ಪರಿಕರ...

ಬೆಳ್ತಂಗಡಿ: ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರಿಂದ ₹ 3 ಲಕ್ಷ ಮೌಲ್ಯದ ವೈದ್ಯಕೀಯ ಪರಿಕರ ಕೊಡುಗೆ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ, ಬೆಂಗಳೂರಿನ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರು ಶುಕ್ರವಾರ ಬೆಳ್ತಂಗಡಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುಮಾರು ರೂಪಾಯಿ ಮೂರು ಲಕ್ಷ ಮೌಲ್ಯದ ಪಿಪಿಯಿ ಕಿಟ್, ಸರ್ಜಿಕಲ್ ಗ್ಲೌಸ್, ಮಾಸ್ಕ್, ಸ್ಯಾನಿಟೈಜರ್ ಹಾಗೂ ಇನ್ನಿತರ ವೈದ್ಯಕೀಯ ಬಳಕೆಗೆ ಬೇಕಾಗುವ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಕಲಾಮಧು ಅವರು ವೈದ್ಯಕೀಯ ಪರಿಕರಗಳನ್ನು ಸ್ವೀಕರಿಸಿ, ದೇವೇಂದ್ರ ಹೆಗ್ಡೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!