Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಬಾವಿಗೆ ಹಾರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿಯಲ್ಲಿ ಬಾವಿಗೆ ಹಾರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಬಾವಿಗೆ ಹಾರಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದೆ. ಈಕೆ ಉದ್ಯಾವರದ ಆಯುರ್ವೇದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಇ.ಎಮ್.ಎಸ್ ವ್ಯಾಸಂಗ ಮಾಡುತ್ತಿದ್ದಳು. ವಾರದ ಹಿಂದೆ ಅಂತಿಮ ವರ್ಷದ ಬಿ.ಇ.ಎಮ್.ಎಸ್ ವ್ಯಾಸಂಗ ಮುಗಿಸಿ ಮನೆಗೆ ಬಂದಿದ್ದ ಇವರು ಬಿ.ಇ ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡಿದ್ದಳು. ಅದರಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದು, ಇದೇ ವಿಷಯಕ್ಕೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!