Thursday, June 4, 2026
Homeಕರಾವಳಿಕೇರಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದ ಯುವಕನೂ ಆತ್ಮಹತ್ಯೆ

ಕೇರಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದ ಯುವಕನೂ ಆತ್ಮಹತ್ಯೆ

- Advertisement -
- Advertisement -

ಕೇರಳ: ಕೋತಮಂಗಲಂ ಬಳಿಯ ನೆಲ್ಲಿಕುಜಿಯಲ್ಲಿ ಇಂದು ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳನ್ನು ಗುಂಡಿಟ್ಟು ಹತ್ಯೆಗೈದ ಯುವಕನೋರ್ವ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಧ್ಯಾಹ್ನ  3:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಹಂತಕನನ್ನು ರಾಖಿಲ್ (24) ಎಂದು ಗುರುತಿಸಲಾಗಿದೆ. ಹತ್ಯೆಯಾದ ಮಾನಸಾ ಪಿ.ವಿ.(24) ಕೋತಮಂಗಲಂ ಇಂದಿರಾ ಗಾಂಧಿ ಡೆಂಟಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಇಬ್ಬರೂ ಕಣ್ಣೂರು ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ನಡುವಿನ ವೈಯಕ್ತಿಕ ದ್ವೇಷ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ವಿದ್ಯಾರ್ಥಿನಿ ವಾಸವಾಗಿದ್ದ ಪಿಜಿ ಬಳಿ ಘಟನೆ ನಡೆದಿದೆ. ರಾಖಿಲ್ ತಮ್ಮ ಪುತ್ರಿಗೆ ತೊಂದರೆ ಕೊಡುತ್ತಿದ್ದಾನೆ ಮತ್ತು ಆಕೆಯನ್ನು ಹಿಂಬಾಲಿಸುತ್ತಿದ್ದಾನೆ ಎಂದು ಮಾನಸಾಳ ಹೆತ್ತವರು ಈ ಹಿಂದೆ ಕಣ್ಣೂರು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಇನ್ನು ವಿದ್ಯಾರ್ಥಿನಿಯನ್ನು ಕೊಲೆಗೈದ ಬಳಿಕ ಯುವಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ,

- Advertisement -

Latest News

error: Content is protected !!