Thursday, June 4, 2026
Homeಕ್ರೀಡೆಟೋಕಿಯೋ ಒಲಿಂಪಿಕ್ಸ್ : ವೇಯ್ಟ್ ​ಲಿಫ್ಟಿಂಗ್​​ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು

ಟೋಕಿಯೋ ಒಲಿಂಪಿಕ್ಸ್ : ವೇಯ್ಟ್ ​ಲಿಫ್ಟಿಂಗ್​​ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೀರಾಬಾಯಿ ಚಾನು

- Advertisement -
- Advertisement -

ಟೋಕಿಯೋ: ಒಲಂಪಿಕ್ಸ್​​ನ ಮಹಿಳಾ ವೇಯ್ಟ್ ​ಲಿಫ್ಟಿಂಗ್​​ನಲ್ಲಿ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಮೀರಾಬಾಯಿ ಚಾನು ಭಾರತಕ್ಕೆ ಮೊದಲ ಪದಕ ತಂದಿದ್ದಾರೆ.

ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಎತ್ತಿದ್ದು, ಕ್ಲೀನ್ ಮತ್ತು ಜರ್ಕ್ನಲ್ಲಿ 115 ಕೆಜಿ ಎತ್ತಿದ್ದಾರೆ. ಇದರೊಂದಿಗೆ ಒಟ್ಟು 202 ಕೆ.ಜಿ.ಗಳನ್ನು ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೋಕಿಯೊ ಕ್ರೀಡಾಕೂಟದಲ್ಲಿ ಇದು ಭಾರತದ ಮೊದಲ ಪಂದ್ಯವಾಗಿದೆ. ಕರ್ಣಂ ಮಲ್ಲೇಶ್ವರಿ ನಂತರ ಭಾರತಕ್ಕೆ ಒಲಿಂಪಿಕ್ಸ್ ಪದಕ ಗೆದ್ದ ಎರಡನೇ ವೇಟ್ ಲಿಫ್ಟರ್ ಆಗಿ ಚಾನು ಗುರುತಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬೆಳ್ಳಿ ಪದಕ ಗೆದ್ದಮೀರಾಬಾಯಿ ಚಾನು ಅವರಿಗೆ ಶುಭಾಶಯವನ್ನು ಕೋರಿದ್ದು, ‘ಅದ್ಭುತ ಪ್ರದರ್ಶನ. ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವಳ ಯಶಸ್ಸು ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆ ಯಾಗಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!