Saturday, June 6, 2026
Homeತಾಜಾ ಸುದ್ದಿಕರಾವಳಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅಭಿವೃದ್ಧಿ ಬಗ್ಗೆ ಇಂದು ಬೆಂಗಳೂರಿನಲ್ಲಿ...

ಕರಾವಳಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಅಭಿವೃದ್ಧಿ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಭಿವೃದ್ಧಿ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಲ್ಲಾ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಲ್ಲದೇ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!