Friday, May 17, 2024
Homeಕರಾವಳಿದ.ಕ., ಉ.ಕ., ಉಡುಪಿ ಜಿಲ್ಲೆಗಳ ಮೀನುಗಾರಿಕೆ ಮತ್ತು ಬಂದರು ಇಲಾಖೆ ಅಭಿವೃದ್ಧಿ ಕುರಿತು ಸಭೆ

ದ.ಕ., ಉ.ಕ., ಉಡುಪಿ ಜಿಲ್ಲೆಗಳ ಮೀನುಗಾರಿಕೆ ಮತ್ತು ಬಂದರು ಇಲಾಖೆ ಅಭಿವೃದ್ಧಿ ಕುರಿತು ಸಭೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಇಲಾಖೆಗಳಿಗೆ ಸಂಬಂದಿಸಿದಂತೆ ಇಲಾಖಾ ವಿಷಯಗಳ ಕುರಿತು ಸಮಾಲೋಚನೆ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಬಂದರು ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭಾಗವಹಿಸಿದ್ದರು.

ಸಭೆಯಲ್ಲಿ ಕುಮಟಾ ಶಾಸಕ ದಿನಕರ್ ಶೆಟ್ಟಿ, ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್,‌ ಕಾರವಾರ ಶಾಸಕ ಸತೀಶ್ ಸೈಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪಾಲ್ಗೊಂಡಿದ್ದರು.

ಸಭೆಯಲ್ಲಿ ಹಣಕಾಸು ಇಲಾಖೆಯ ಎಸಿಎಸ್ ಎಲ್.ಕೆ. ಅತೀಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!