Wednesday, June 24, 2026
Homeಕರಾವಳಿಮಂಗಳೂರುಅಧಿವೇಶನದಲ್ಲಿ ಕೆಂಪು ಕಲ್ಲುಗಣಿಗಾರಿಕೆ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಪುತ್ತೂರು ಶಾಸಕ ಅಶೋಕ್ ಕುಮಾರ್...

ಅಧಿವೇಶನದಲ್ಲಿ ಕೆಂಪು ಕಲ್ಲುಗಣಿಗಾರಿಕೆ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ; ಇದರ ಬೆನ್ನಲ್ಲೇ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಬಗ್ಗೆ ಸ್ಪೀಕರ್ ಖಾದರ್ ನೇತೃತ್ವದಲ್ಲಿ ಕರಾವಳಿ ಶಾಸಕರು, ಸಚಿವರ ಸಭೆ

- Advertisement -
- Advertisement -

ಪುತ್ತೂರು: ಕೆಂಪು ಕಲ್ಲುಗಣಿಗಾರಿಕೆಗೆ ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಅಧಿವೇಶನದಲ್ಲಿ ಸೋಮವಾರ ಸರಕಾರದ ಗಮನಸೆಳೆದು ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದ್ದರು. ಕೆಂಪು ಕಲ್ಲು ಗಣಿಗಾರಿಕೆಗೆ ನಿರ್ಬಂಧ ವಿಧಿಸಿದ ಕಾರಣ ಬಡ ಗಾರೆ ಕಾರ್ಮಿಕರಿಗೂ ತೊಂದರೆಯಾಗಿರುವ ಬಗ್ಗೆ ಸರಕಾರದ ಗಮನ ಸೆಳೆದಿದ್ದರು.  ಇದರ ಬಗ್ಗೆ ಚರ್ಚೆ ನಡೆಸಲು ಮಂಗಳವಾರ ಸಭೆ ಕರೆಯಲಾಗಿತ್ತು.

ಬೆಂಗಳೂರಿನ ವಿಧಾನಸೌಧದ ಸಭಾಂಗಣದ ಕೊಠಡಿಯಲ್ಲಿ ವಿಧಾನ‌ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆ (ಕೆಂಪು ಕಲ್ಲು ವಿಚಾರಕ್ಕೆ ಸಂಬಂಧಿಸಿದಂತೆ) ಸಮಸ್ಯೆಗಳ  ಬಗ್ಗೆ ದಕ್ಷಿಣ ಕನ್ನಡ, ಉಡುಪಿ, ‌ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ್, ಮಂಕಾಳ್ ವೈದ್ಯ, ಹಿರಿಯರ ಶಾಸಕರಾದ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮಂಜುನಾಥ್ ಭಂಡಾರಿ ಸೇರಿದಂತೆ ಮೂರು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ‌

- Advertisement -

Latest News

error: Content is protected !!