Monday, April 29, 2024
Homeಕರಾವಳಿಬೆಳ್ತಂಗಡಿ: ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಜೊತೆ ಶಾಸಕರ...

ಬೆಳ್ತಂಗಡಿ: ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಜೊತೆ ಶಾಸಕರ ಸಭೆ!

spot_img
- Advertisement -
- Advertisement -

ಬೆಳ್ತಂಗಡಿ: ಭಜನಾ ಮಂದಿರಗಳ ಮೂಲ ಸೌಕರ್ಯ, ಅಭಿವೃದ್ಧಿಗೆ ಹಾಗೂ ಮಂದಿರದ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ದಾಖಲೆಗಳ ಸರಿಪಡಿಸುವಿಕೆ ಬಗ್ಗೆ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಭಾನುವಾರ ಬೆಳ್ತಂಗಡಿ ತಾಲ್ಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜೊತೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ಮಂದಿರಗಳಿಗೆ ಹಕ್ಕುಪತ್ರ ನೀಡಲು ಮೂರು ವರ್ಷದ ನೋಂದಣಿ ಸೇರಿದಂತೆ ಹಲವು ದಾಖಲೆಗಳ ಅಗತ್ಯವಿದೆ. ಪೈಲಟ್ ಯೋಜನೆಯಂತೆ ಸರ್ಕಾರದ ಮಟ್ಟದಲ್ಲಿ ಸೂಕ್ತ ದಾಖಲೆಯೊಂದಿಗೆ ಸರ್ಕಾರಿ ಸ್ಥಳದಲ್ಲಿ ಈಗ ಕಟ್ಟಿರುವ ಭಜನಾ ಮಂಡಳಿಯನ್ನು ಸಕ್ರಮಗೊಳಿಸಲು ಸಾಧ್ಯವಾಗಲಿದೆ. ಇದಕ್ಕಾಗಿ ವಕೀಲರಲ್ಲಿ ಹಾಗೂ ಕಂದಾಯ ಅಧಿಕಾರಿಗಳಲ್ಲಿ ಚರ್ಚೆ ನಡೆಸಲಾಗಿದೆ’ ಎಂದರು.

ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಮಂಜು ನಾಥ ಶೆಟ್ಟಿ, ಭಜನಾ ಪರಿಷತ್ ತಾಲ್ಲೂಕು ಕಾರ್ಯದರ್ಶಿ ಜನಾರ್ದನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ಸಭೆಯಲ್ಲಿ ತಾಲ್ಲೂಕಿನ 100ಕ್ಕೂ ಅಧಿಕ ಭಜನಾ ಮಂಡಳಿಗಳ ಪ್ರಮುಖರು ಭಾಗವಹಿಸಿದ್ದು, ಸರ್ಕಾರಿ ಜಾಗದಲ್ಲಿರುವ ಭಜನಾ ಮಂಡಳಿಗೆ ದಾಖಲೆ, ಶೌಚಾಲಯ ವ್ಯವಸ್ಥೆ, ನವೀಕರಣ ಹಾಗೂ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸರ್ಕಾರಿ ಸ್ಥಳದಲ್ಲಿ ಕಟ್ಟಿದ ಭಜನಾ ಮಂಡಳಿಗಳ ದಾಖಲೆ ಸರಿಪಡಿಸಿ ಹಕ್ಕುಪತ್ರ ನೀಡುವ ಕುರಿತು, ನೀರಿನ ಸೌಕರ್ಯ, ವಿದ್ಯುತ್ ಸಂಪರ್ಕ, ಮಂದಿರಗಳ ಕಟ್ಟಡ ನವೀಕರಣ ಮೊದಲಾದ ವಿಷಯದಲ್ಲಿ ಶಾಸಕರು ಚರ್ಚೆ ನಡೆಸಿದರು.

- Advertisement -
spot_img

Latest News

error: Content is protected !!