Monday, May 20, 2024
Homeಕರಾವಳಿಪೌರಕಾರ್ಮಿಕರು ಹಾಗೂ ಒಳಚರಂಡಿ ಕಾರ್ಮಿಕರ ವೇತನ ಪರಿಷ್ಕರಣೆ ಹಾಗೂ ಖಾಯಂ ಸಚಿವ ಕೋಟ ನೇತೃತ್ವದಲ್ಲಿ ವಿಶೇಷ...

ಪೌರಕಾರ್ಮಿಕರು ಹಾಗೂ ಒಳಚರಂಡಿ ಕಾರ್ಮಿಕರ ವೇತನ ಪರಿಷ್ಕರಣೆ ಹಾಗೂ ಖಾಯಂ ಸಚಿವ ಕೋಟ ನೇತೃತ್ವದಲ್ಲಿ ವಿಶೇಷ ಸಭೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಹಾಗೂ ಒಳಚರಂಡಿ ಕಾರ್ಮಿಕರ ವೇತನ ಪರಿಷ್ಕರಣೆ ಹಾಗೂ ಖಾಯಂ ಗೊಳಿಸುವ ಮತ್ತು ಇತರೆ ಸಮಸ್ಯೆಗಳ ಕುರಿತು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ವಿಶೇಷ ಸಭೆ ನಡೆಯಿತು.

 ಮಂಗಳೂರು ಮಹಾನಗರ ಪಾಲಿಕೆಯಲ್ಲಿ 790 ಪೌರ ಕಾರ್ಮಿಕರು ಹಾಗೂ 232  ಒಳಚರಂಡಿ ಕಾರ್ಮಿಕರಿದ್ದು ಅವರಿಗೆ ಕಾರ್ಮಿಕ ಇಲಾಖೆಯ ನಿಯಮಗಳನ್ವಯ ಕನಿಷ್ಠ ವೇತನ ನೀಡುವ ಬಗ್ಗೆ ಹಾಗೂ ಅವರನ್ನು ಖಾಯಂ ಮಾಡುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಸಚಿವರು ತಕ್ಷಣ ನಿಯಮಾನುಸಾರ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ನಗರಾಡಳಿತ ಇಲಾಖೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮನೆ ಕಟ್ಟಲು ಅನುದಾನವನ್ನು ಹೆಚ್ಚಿಸುವ ಹಾಗೂ ಇ ಸ್ವತ್ತು ಸರ್ವರ್, ಪರಿಹಾರಗಳನ್ನು ನೀಡುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರ ಪ್ರೇಮಾನಂದ್ ಶೆಟ್ಟಿ, ಉಪ ಮಹಾಪೌರರಾದ ಸುಮಂಗಲಾ ರಾವ್,  ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಇಲಾಖೆ ಸಲಹೆಗಾರ ಡಾ.ವೆಂಕಟಯ್ಯ, ನಗರಾಡಳಿತ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್,  ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ  ಡಾ.ಕೆ.ರಾಕೇಶ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರಿಧರ್, ಮಂಗಳೂರು ಮಹಾನಗರಪಾಲಿಕೆಯ ಪೌರಕಾರ್ಮಿಕರು, ಇತರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!