Friday, June 5, 2026
Homeತಾಜಾ ಸುದ್ದಿಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಪಾಸಿಟಿವ್!..

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಪಾಸಿಟಿವ್!..

- Advertisement -
- Advertisement -

ಹೈದರಾಬಾದ್ : ತೆಲುಗು ಚಿತ್ರರಂಗದ ಮೆಗಾಸ್ಟಾರ್ ಎಂದೇ ಖ್ಯಾತಿ ಪಡೆದಿರುವಂತ ನಟ ಚಿರಂಜೀವಿ ಅವರಿಗೂ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ಅವರನ್ನು ಅವರ ಮನೆಯಲ್ಲಿಯೇ ಹೋಂ ಐಸೋಲೇಷನ್ ಗೊಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿ ತಮ್ಮ ಆರೋಗ್ಯದ ಕುರಿತು ತಿಳಿಸಿದ್ದು ಚಿತ್ರ ಒಂದರ ಶೂಟಿಂಗ್ ಮೊದಲು ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ತಮ್ಮ ಕೊರೋನಾ ಸೋಂಕು ಪತ್ತೆ ಪರೀಕ್ಷೆಯ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಹೀಗಾಗಿ ನಾನು ಸ್ವಯಂ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ. ನನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿ. ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ತಪ್ಪದೇ ಪರೀಕ್ಷೆಗೆ ಒಳಪಟ್ಟು, ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ. ಹಲವು ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಮೆಗಾಸ್ಟಾರ್ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.

- Advertisement -

Latest News

error: Content is protected !!