Thursday, June 4, 2026
Homeತಾಜಾ ಸುದ್ದಿಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕಿ- ಮೆಹಬೂಬಾ ಮುಫ್ತಿ ಗೃಹ ಬಂಧನಕ್ಕೆ ಮುಕ್ತಿ!

ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕಿ- ಮೆಹಬೂಬಾ ಮುಫ್ತಿ ಗೃಹ ಬಂಧನಕ್ಕೆ ಮುಕ್ತಿ!

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ರ ರದ್ಧತಿ ವೇಳೆ ಅಲ್ಲಿನ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರು ಗೃಹ ಬಂಧನಲ್ಲಿಟ್ಟಿದ್ದರು.ಈ ಕಾನೂನಿನ ಅಡಿಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಮುಫ್ತಿ ಮೆಹಬೂಬಾ ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕರಾಗಿದ್ದಾರೆ. ಬಳಿಕ ಒಮರ್ ಅಬ್ದುಲ್ಲಾ ಸೇರಿದಂತೆ ಎಲ್ಲ ಪ್ರತ್ಯೇಕತಾವಾದಿ ನಾಯಕರನ್ನು ಸರ್ಕಾರ ಗೃಹ ಬಂಧನದಲ್ಲಿರಿಸಿತ್ತು. ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತ ವಕ್ತಾರ ರೋಹಿತ್ ಕನ್ಸಾಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!