Wednesday, June 26, 2024
Homeಪ್ರಮುಖ-ಸುದ್ದಿBIG BREAKING: ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಸ್ಥಗಿತ ಗೊಳಿಸಿದ ಕಾಂಗ್ರೆಸ್

BIG BREAKING: ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಸ್ಥಗಿತ ಗೊಳಿಸಿದ ಕಾಂಗ್ರೆಸ್

spot_img
- Advertisement -
- Advertisement -

ರಾಮನಗರ: ಮೇಕೆದಾಟು ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆ ಸ್ಥಗಿತಗೊಂಡಿದೆ. ಭಾರೀ ಒತ್ತಡದ ಹಿನ್ನಲೆಯಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನ ಮಾಡಿದ್ದಾರೆ.

ಗುರುವಾರ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಪಾದಯಾತ್ರೆ ಮುಂದುವರೆಸುವ, ಮೊಟಕುಗೊಳಿಸುವ ಕುರಿತು ಚರ್ಚೆ ನಡೆಯಿತು.

ಜನವರಿ 9ರಂದು ಮೇಕೆದಾಟುವಿನ ಸಂಗಮದಿಂದ ಆರಂಭವಾಗಿದ್ದ 11 ದಿನಗಳ ಪಾದಯಾತ್ರೆ 4 ದಿನ ಪೂರ್ಣಗೊಳಿಸಿದೆ. ರಾಮನಗರ ತಲುಪಿರುವ ಪಾದಯಾತ್ರೆ ಗುರುವಾರ ಆರಂಭವಾಗಿಲ್ಲ. ಒಟ್ಟು 160 ಕಿ. ಮೀ. ಪಾದಯಾತ್ರೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನ ತಲುಪಬೇಕಿತ್ತು. ಗುರುವಾರ ರಾಮನಗರದಿಂದ ಬಿಡದಿ ತನಕ ಪಾದಯಾತ್ರೆ ನಡೆಯಬೇಕಿತ್ತು. ಬುಧವಾರ ರಾತ್ರಿಯೇ ಕರ್ನಾಟಕ ಸರ್ಕಾರ ಪಾದಯಾತ್ರೆ ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸರು ಗುರುವಾರ ಪಾದಯಾತ್ರೆ ಆರಂಭವಾಗದಂತೆ ತಡೆಯಲು ಎಲ್ಲಾ ಕ್ರಮ ಕೈಗೊಂಡಿದ್ದರು. ಗುರುವಾರದ ಪಾದಯಾತ್ರೆ ಆರಂಭಗೊಂಡರೆ ಕಾಂಗ್ರೆಸ್ ನಾಯಕರನ್ನು ಬಂಧಿಸುವ ಸಾಧ್ಯತೆ ಇತ್ತು.

ಕರ್ನಾಟಕ ಹೈಕೋರ್ಟ್ ಪಾದಯಾತ್ರೆ ನಡೆಸಲು ಅನುಮತಿ ನೀಡಿದ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಮತ್ತು ಕೆಪಿಸಿಸಿಗೆ ನೋಟಿಸ್ ನೀಡಿತ್ತು. ಆದ್ದರಿಂದ ಬುಧವಾರ ರಾತ್ರಿ ಸರ್ಕಾರ ಪಾದಯಾತ್ರೆ ತಕ್ಷಣ ಸ್ಥಗಿತಗೊಳಿಸಲು ಆದೇಶ ಹೊರಡಿಸಿತ್ತು.

ಮತ್ತೆ ಪಾದಯಾತ್ರೆ ಆರಂಭ ಕೋವಿಡ್ ಪರಿಸ್ಥಿತಿ ಸುಧಾರಿಸಿದ ಬಳಿಕ ಮತ್ತೆ ಕಾಂಗ್ರೆಸ್ ಮೇಕದಾಟು ಪಾದಯಾತ್ರೆಯನ್ನು ಆರಂಭಿಸಲಿದೆ. ಎಲ್ಲಿ ಪಾದಯಾತ್ರೆ ಅಂತ್ಯಗೊಂಡಿದೆಯೋ ಅಲ್ಲಿಂದಲೇ ಮುಂದುವರೆಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಹ ಪಾದಯಾತ್ರೆ ನಿಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕರೆ ಮಾಡಿದ್ದರು. ರಾಜ್ಯದ ಹಲವು ನಾಯಕರು ಸಹ ಪಾದಯಾತ್ರೆ ನಿಲ್ಲಿಸೋಣ, ಕೋವಿಡ್ ಪರಿಸ್ಥಿತಿ ಬಳಿಕ ಮುಂದುವರೆಸೋಣ ಎಂದು ಒತ್ತಾಯಿಸಿದ್ದರು.

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಕಾಂಗ್ರೆಸ್ ನಾಯಕರಿಗೆ ಪತ್ರ ಬರೆದಿದ್ದರು. ಪಾದಯಾತ್ರೆ ನಿಲ್ಲಿಸಿ ಎಂದು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೊಟಕುಗೊಳಿಸಲು ತೀರ್ಮಾನ ಮಾಡಿದ್ದಾರೆ.

- Advertisement -
spot_img

Latest News

error: Content is protected !!