Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್...

ಬೆಳ್ತಂಗಡಿ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ಗೌರವ ಅರ್ಪಣೆ

- Advertisement -
- Advertisement -

ಬೆಳ್ತಂಗಡಿ : ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ ರಚನೆಯಾಗಿದ್ದು. ಈ ಸಮಿತಿಯ ರಚನೆಗೆ ಸಹಕಾರ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಮೇ.26 ರಂದು ಸಮಿತಿಯ ಅಧ್ಯಕ್ಷರು ಸದಸ್ಯರು ಗೌರವ ಅರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ಗಣೇಶ್ ಕಾಶಿ ಕೊಕ್ಕಡ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ,ಪ್ರಶಾಂತ್ ಮಚ್ಚಿನ, ಉಪಸ್ಥಿತರಿದ್ದರು

- Advertisement -

Latest News

error: Content is protected !!