Wednesday, May 15, 2024
Homeತಾಜಾ ಸುದ್ದಿಮದುವೆ ಆಗಿಲ್ಲವೆಂದು ಬೇಸತ್ತು ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

ಮದುವೆ ಆಗಿಲ್ಲವೆಂದು ಬೇಸತ್ತು ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಬೆಂಗಳೂರು: ಜೀವನದಲ್ಲಿ ಬೇಸತ್ತು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದರಿ ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪೀಣ್ಯಾದ ಸರ್ಕಾರಿ ಐಟಿಐ ಜಾಗದಲ್ಲಿ ನಡೆದಿದೆ.


ಅಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ.
ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎಂದು ತಿಳಿದುಬಂದಿದೆ.

ಗಾರ್ಮೆಂಟ್ಸ್ ನಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ವೊಂದರಲ್ಲಿ ಪೆಟ್ರೋಲ್ ಖರೀದಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ ತಂದೆಯವರೂ ಸಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ. ಆತ್ಮಹತ್ಯೆಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ.

ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ.
ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!