Friday, June 26, 2026
Homeಕರಾವಳಿಸುರತ್ಕಲ್: ಮೋರಿಯಲ್ಲಿ ಬಿದ್ದು ಸಾವನ್ನಪ್ಪಿದ ವ್ಯಕ್ತಿ

ಸುರತ್ಕಲ್: ಮೋರಿಯಲ್ಲಿ ಬಿದ್ದು ಸಾವನ್ನಪ್ಪಿದ ವ್ಯಕ್ತಿ

- Advertisement -
- Advertisement -

ಸುರತ್ಕಲ್ : ಮೋರಿಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ವರದಿಯಾಗಿದೆ.


ಮೃತರನ್ನು ಮುಲ್ಕಿ ನಿವಾಸಿ ರಮೇಶ ಎಂದು ತಿಳಿದು ಬಂದಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ 5ನೇ ಬ್ಲಾಕ್ ನಲ್ಲಿರುವ ದೈವಸ್ಥಾನದ ಬಳಿಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತಹೇಹವನ್ನು ಮಹಜರು ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.

- Advertisement -

Latest News

error: Content is protected !!