Thursday, August 20, 2026
Homeಅಪರಾಧಪತ್ನಿಯನ್ನು ಕೊಂದು ಮನೆಗೆ ಬೀಗ ಹಾಕಿ ಪತಿ ಎಸ್ಕೆಪ್: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಪತ್ನಿಯನ್ನು ಕೊಂದು ಮನೆಗೆ ಬೀಗ ಹಾಕಿ ಪತಿ ಎಸ್ಕೆಪ್: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

- Advertisement -
- Advertisement -

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿರೋ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕಾವೇರಿಪುರದಲ್ಲಿ ನಡೆದಿದೆ.


ವನಜಾಕ್ಷಿ (34) ಕೊಲೆಯಾದ ಮಹಿಳೆ ಮೃತ ಮಹಿಳೆ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಮೂರು ದಿನಗಳ ಹಿಂದೆ ಕೋಲೆಯಾಗಿದೆ ಎಂದು ಶಂಕಿಸಲಾಗಿದೆ. ಸ್ಥಳೀಯರಿಗೆ ಮನೆಯಿಂದ ಕೆಟ್ಟ ವಾಸನೆ ಬಂದ ಕಾರಣ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.


ಏಪ್ರಿಲ್ 17 ರಾತ್ರಿ ವನಜಾಕ್ಷಿ ಹಾಗೂ ಪತಿ ಅಶೋಕ್ ನಡುವೆ ಗಲಾಟೆ ನಡೆದಿದೆ. ಗಲಾಟೆಯು ಅತಿರೇಕಕ್ಕೆ ಹೋಗಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಬಳಿಕ ಮನೆಗೆ ಬೀಗ ಹಾಕಿಕೊಂಡು ಆರೋಪಿ ಅಶೋಕ್ ಎಸ್ಟೇಪ್ ಆಗಿದ್ದಾನೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಶೋಕ್ ವಿರುದ್ಧ ಮೃತ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದರು. ಗಂಡನೆ ಹೆಂಡ್ತಿಯ ಕುತ್ತಿಗೆ ಹಿಸುಕಿ ಕೊಂದು ಹಾಕಿ ಎಸ್ಕೆಪ್ ಅಗಿದ್ದಾನೆ ಎಂದು ಮೃತ ಸಹೋದರ ಆರೋಪಿಸಿದ್ದಾನೆ.

- Advertisement -

Latest News

error: Content is protected !!