ಬೆಂಗಳೂರು: ಬೆಂಗಳೂರು ನಗರದ ಬೈಯಪ್ಪನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಆರೋಪಿ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
7 ವರ್ಷದ ಹಿಂದೆ ವಿವಾಹವಾಗಿದ್ದ ಬಳಿಕ ಆಕೆ ತೀರಿಹೋಗಿದ್ದಳು, ಹೀಗಾಗಿ ಎರಡನೇ ಮದುವೆಯಾಗಿದ್ದ. ಇಬ್ಬರು ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು.ನಂತರದಲ್ಲಿ ಇವರ ದಾಂಪತ್ಯ ಜೀವನವು ಚೆನ್ನಾಗಿಯೇ ಇತ್ತು.ಆದರೆ ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನೆಲ್ಲಾ ಅವನು ಕುಡಿದು ಹಾಳು ಮಾಡುತ್ತಿದ್ದನು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು.
ಬುಧವಾರವೂ ಸಹ ಇದೇ ವಿಚಾರವಾಗಿ ಗಲಾಟೆಯಾಗಿದ್ದು, ನಾನು ಸೀಮೆ ಎಣ್ಣೆಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿ ಬೆದರಿಸಿದ್ದಾಳೆ. ಇದಕ್ಕೆ ಸಿಟ್ಟಿಗೆದ್ದ ಪತಿ ಅವನೇ ಡೀಸೆಲ್ ತಂದು ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಮಹಿಳೆಗೆ ಸುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ


