Friday, June 5, 2026
Homeತಾಜಾ ಸುದ್ದಿಮಂಗಳೂರು: ಒಂದು ತಿಂಗಳೊಳಗೆ ಸುರತ್ಕಲ್ ಟೋಲ್‌ ಗೇಟ್‌ ವಿಲೀನ: ಕಟೀಲ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ

ಮಂಗಳೂರು: ಒಂದು ತಿಂಗಳೊಳಗೆ ಸುರತ್ಕಲ್ ಟೋಲ್‌ ಗೇಟ್‌ ವಿಲೀನ: ಕಟೀಲ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ

- Advertisement -
- Advertisement -

ಮಂಗಳೂರು: ಇನ್ನೊಂದು ತಿಂಗಳಲ್ಲಿ ಸುರತ್ಕಲ್ ಟೋಲ್‌ ಗೇಟ್‌ನ ಸಮೀಪದ ಹೆಜಮಾಡಿ ಟೋಲ್‌ ಜೊತೆ ವಿಲೀನ ಮಾಡಲು ದಿಶಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಯಿತು. ಈ ಸಭೆಯಲ್ಲಿ ಸುರತ್ಕಲ್‌ ಗೇಟ್‌ ವಿಲೀನದ ಬಗ್ಗೆ ಚರ್ಚೆ ನಡೆಯಿತು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಭಾಗವಹಿಸಿದ್ದಾರೆ.

- Advertisement -

Latest News

error: Content is protected !!