Saturday, May 18, 2024
Homeತಾಜಾ ಸುದ್ದಿಕನ್ನಡ ಹಾಡು ಹಾಕಿದ್ದಕ್ಕೆ ವಧು, ವರ ಸೇರಿದಂತೆ ಕನ್ನಡಿಗರ ಮೇಲೆ ಹಲ್ಲೆ; ಎಂಇಎಸ್ ಗೂಂಡಾಗಳ ಪುಂಡಾಟಿಕೆ

ಕನ್ನಡ ಹಾಡು ಹಾಕಿದ್ದಕ್ಕೆ ವಧು, ವರ ಸೇರಿದಂತೆ ಕನ್ನಡಿಗರ ಮೇಲೆ ಹಲ್ಲೆ; ಎಂಇಎಸ್ ಗೂಂಡಾಗಳ ಪುಂಡಾಟಿಕೆ

spot_img
- Advertisement -
- Advertisement -

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಗೂಂಡಾಗಳ ಪುಂಡಾಟಿಕೆ ಹೆಚ್ಚಾಗಿದ್ದು, ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಾಮಣೆ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ದಾಮಣೆ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರ ಸಿದ್ದು ತಮ್ಮ ಭರಮಾ ಸೇರಿ ಐವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಧು ವರ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವರ ಸಿದ್ದು ಸೈಬಣ್ಣವರ್ ಅವರ ಮನೆಯಲ್ಲಿ ಮದುವೆ ಸಮಾರಂಭವಿದ್ದ ಹಿನ್ನೆಲೆ ರಾತ್ರಿ ಬ್ಯಾಂಡ್ ಹಚ್ಚಿ ಮೆರವಣಿಗೆ ಮೂಲಕ ವಧು-ವರನನ್ನು ಮನೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮದುವೆ ಸಮಾವೇಶದಲ್ಲಿ ಕನ್ನಡ ಧ್ವಜ ಹಿಡಿದು ‘ಕರುನಾಡೇ’ ಹಾಡಿಗೆ ಯುವಕರು ಕುಣಿದು ಕುಪ್ಪಳಿಸುತ್ತಿದ್ದರು. ಆಗ ಎಂಇಎಸ್ ಗೂಂಡಾಗಳಾದ ಅಜಯ್ ಯಳ್ಳೂರಕರ್, ಆಕಾಶ್ ಸೇರಿ ಎಂಟತ್ತು ಯುವಕರ ತಂಡವೊಂದು ಆಗಮಿಸಿ ಕನ್ನಡ ಹಾಡನ್ನು ಹಾಕದಂತೆ ಎಚ್ಚರಿಕೆ ನೀಡಿ ಗಲಾಟೆ ಪ್ರಾರಂಭಿಸಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದ ವಿಕೋಪಕ್ಕೆ ಹೋಗಿ ಎಂಇಎಸ್ ಪುಂಡರು ವಧು ವರ ಸೇರಿ ಆತನ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಠಾಣೆಗೆ ಕುಟುಂಬಸ್ಥರ ದೂರು ನೀಡಿದ್ದಾರೆ. ಇತ್ತ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಮೊದಲು ಎಂಇಎಸ್ ತಂಡವು ಬೆಳಗಾವಿ ಅಧಿವೇಶನದ ವೇಳೆಗೆ ಮನೆ ಎದುರಿಗೆ ನಿಂತಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದರು. ನಗರದಲ್ಲಿ ಹಾಕಿದ್ದ ರಾಣಿ ಚನ್ನಮ್ಮ ಎನ್ನುವ ಕೈಬರಹದ ಬೋರ್ಡ್ ಕಿತ್ತು ತೆಗೆದು ಧರ್ಮವೀರ ಸಂಭಾಜಿ ನಗರ ಬೋರ್ಡ್ ಹಾಕಿ ಎಂಇಎಸ್ ಗೂಂಡಾಗಳು ಕ್ರೌರ್ಯ ಮೆರೆದಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!