Saturday, June 6, 2026
HomeUncategorizedಉಡುಪಿ: 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಉಡುಪಿ: 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

- Advertisement -
- Advertisement -

ಉಡುಪಿ: 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದಾಗ ಮೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.ಬ್ರಹ್ಮಾವರ ಮೆಸ್ಕಾಂ‌ನ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ‌ (46) ಸಿಕ್ಕಿ ಬಿದ್ದ ಇಂಜಿನಿಯರ್.

ಇವರು ದಿನೇಶ್ ಪೂಜಾರಿ ಎಂಬವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕಳೆದ ತಿಂಗಳು ಸ್ಥಳ ಪರಿಶೀಲನೆ ನಡೆಸಿದ್ದರು. ನಂತರ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಲಂಚ ನೀಡಲು ಒಪ್ಪದ ದಿನೇಶ್ ಲೋಕಾಯುಕ್ತ ಗಮನಕ್ಕೆ ಇದನ್ನು ತಂದಿದ್ದರು. ಶುಕ್ರವಾರ ಬೆಳಗ್ಗೆ ಲಂಚ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ,ರಾಜೇಂದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

- Advertisement -

Latest News

error: Content is protected !!