Wednesday, June 3, 2026
Homeಕರಾವಳಿಬಂಟ್ವಾಳ: ಮನೆಯೊಂದರ ಮಹಡಿಯ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದು ಮೇಸ್ತ್ರಿ ಸಾವು

ಬಂಟ್ವಾಳ: ಮನೆಯೊಂದರ ಮಹಡಿಯ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದು ಮೇಸ್ತ್ರಿ ಸಾವು

- Advertisement -
- Advertisement -

ಬಂಟ್ವಾಳ: ಮನೆಯೊಂದರ ಮಹಡಿಯ ಮೇಲೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದ ಮೇಸ್ತ್ರಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಮೃತ ವ್ಯಕ್ತಿ.

ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಪ್ರಕಾಶ್ ಉತ್ತಮ ಕೆಲಸಗಾರನಾಗಿದ್ದರು‌ ಎನ್ನಲಾಗಿದೆ.

- Advertisement -

Latest News

error: Content is protected !!