- Advertisement -
![]()
- Advertisement -
ಮಂಗಳೂರು; ಹವಮಾನ ಇಲಾಖೆ ಜೂನ್ 27 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. 2 ವಾರಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಮಳೆ ಜೂನ್ 27 ರವರೆಗೆ ಜೋರಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಕರಾವಳಿ ಕರ್ನಾಟಕದ ಸಮುದ್ರ ತೀರದಲ್ಲಿ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
- Advertisement -


