Wednesday, June 24, 2026
Homeತಾಜಾ ಸುದ್ದಿಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ಸಜ್ಜಾದ ಹೋರಾಟಗಾರರು: ಸ್ಥಳದಲ್ಲಿ ಬಿಗಿ ಬಂದೋಬಸ್ತ್

ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲು ಸಜ್ಜಾದ ಹೋರಾಟಗಾರರು: ಸ್ಥಳದಲ್ಲಿ ಬಿಗಿ ಬಂದೋಬಸ್ತ್

- Advertisement -
- Advertisement -

ಸುರತ್ಕಲ್: ಸುರತ್ಕಲ್‍ನ ಎನ್‍ಐಟಿಕೆ (NITK) ಬಳಿ ಇರುವ ಟೋಲ್ ಗೇಟ್ ಅಕ್ರಮವಾಗಿ ಕಟ್ಟಲಾಗಿದೆ. ಹೀಗಾಗಿ ಅದನ್ನು ತೆರವುಗೊಳಿಸಬೇಕೆಂದು ಈ ಹಿಂದೆ ಸಾಕಷ್ಟು ಹೋರಾಟಗಳು ನಡೆದಿತ್ತು. ಆದ್ರೆ ಈವರೆಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ತೆರವಿಗೆ ಪ್ರಯತ್ನಪಟ್ಟಿಲ್ಲ. ಹೀಗಾಗಿ ಇಂದು ಸಾವಿರಾರು ಹೋರಾಟಗಾರರೇ ಬೃಹತ್ ಪ್ರತಿಭಟನೆಯ ಮೂಲಕ ಟೋಲ್ ಗೇಟನ್ನು ಕಿತ್ತೆಸೆಯಲು ಮುಂದಾಗಿದ್ದಾರೆ.  ಈಗಾಗಲೇ ಪ್ರತಿಭಟನೆ ಆರಂಭವಾಗಿದ್ದು  ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳ ಪೊಲೀಸರನ್ನ ಭದ್ರತೆಗೆ ಹಾಕಲಾಗಿದೆ. ಬಹುತೇಕ 300ಕ್ಕೂ ಅಧಿಕ ಪೊಲೀಸರು, ಕೆಎಸ್​ಆರ್​ಟಿಸಿ ಸಿಬ್ಬಂದಿ ನಿಯೋಜಿಸಲಾಗಿದೆ.

- Advertisement -

Latest News

error: Content is protected !!