Sunday, May 12, 2024
Homeಉದ್ಯಮದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್..!

ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್..!

spot_img
- Advertisement -
- Advertisement -

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಕೊರೊನಾ ಸೋಂಕು, ಲಾಕ್ಡೌನ್ ಕಾರಣದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಳಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್ ಹಾಲು ಉಳಿಯುತ್ತಿದ್ದು, ಇದನ್ನು ಹಾಲಿನ ಪುಡಿಯಾಗಿ ಪರಿವರ್ತಿಸಲಾಗುತ್ತಿದೆ.

ಹೊರರಾಜ್ಯಗಳಲ್ಲಿಯೂ ಹಾಲಿನ ಪುಡಿಗೆ ಬೇಡಿಕೆ ಕುಸಿದಿದೆ. ನಷ್ಟ ಸರಿದೂಗಿಸಿಕೊಳ್ಳಲು ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರವನ್ನು ಕಡಿಮೆ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ, ತುಮಕೂರು, ಮೈಸೂರು, ಮಂಡ್ಯ, ಹಾಸನ ಮೊದಲಾದ ಹಾಲು ಒಕ್ಕೂಟಗಳು ಪ್ರತಿ ಲೀಟರ್ ಗೆ 5 ರೂಪಾಯಿವರೆಗೂ ಹಾಲಿನ ದರವನ್ನು ಕಡಿಮೆ ಮಾಡಿವೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!