Monday, June 8, 2026
Homeಕರಾವಳಿನಾರಾವಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕೈಕಾಲು ಕಟ್ಟಿ ಹಾಕಿ ದರೋಡೆ: ಲಕ್ಷಾಂತರ ರೂ. ಮೌಲ್ಯದ...

ನಾರಾವಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕೈಕಾಲು ಕಟ್ಟಿ ಹಾಕಿ ದರೋಡೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್‌

- Advertisement -
- Advertisement -

ನಾರಾವಿ: ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ.

ನಿನ್ನೆ ಸಂಜೆ (ನ.12) ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಒಂಟಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ತೆಗೆದು, ಮನೆಯಲ್ಲಿದ್ದ ಉಳಿದ ಚಿನ್ನಾಭರಣವನ್ನು ದೋಚಿದ್ದಾರೆ ಎನ್ನಲಾಗಿದೆ. ಒಟ್ಟು 4,60,000 ಮೌಲ್ಯದ ಚಿನ್ನಾಭರಣ ಕಳುವಾಗಿದೆ.

ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!