Saturday, June 6, 2026
Homeತಾಜಾ ಸುದ್ದಿಸಚಿವ ಡಾ.ಕೆ.ಸುಧಾಕರ್ ಪತ್ನಿ,ಮಗಳಿಗೆ ಕೊರೊನಾ ಪಾಸಿಟಿವ್!

ಸಚಿವ ಡಾ.ಕೆ.ಸುಧಾಕರ್ ಪತ್ನಿ,ಮಗಳಿಗೆ ಕೊರೊನಾ ಪಾಸಿಟಿವ್!

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಸಚಿವ ಡಾ.ಕೆ.ಸುಧಾಕರ್ ಅವರ ಮನೆಯ ಅಡುಗೆ ಕೆಲಸ ಮಾಡುತ್ತಿದ್ದಾತನಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಸಚಿವರ ತಂದೆಗೆ ಶಂಕಿತ ಕೊರೊನಾ ಲಕ್ಷಣಗಳು ಗೋಚರಿಸಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರ ಇಡೀ ಕುಟುಂಬ ಕೊರೊನಾ ತಪಾಸಣೆಗೆ ಒಳಪಟ್ಟಿತ್ತು. ಕೊರೊನಾ ತಪಾಸಣೆಯಲ್ಲಿ ಸಧಾಕರ್ ಅವರ ತಂದೆಗೆ ಕೊರೊನಾ ಸೋಂಕು ಇರುವುದು ನಿನ್ನೆಯೇ ದೃಢಪಟ್ಟಿತ್ತು. ಆದ್ರೀಗ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹತಿ ನೀಡಿರುವ ಸುಧಾಕರ್, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!