Thursday, April 25, 2024
Homeತಾಜಾ ಸುದ್ದಿ'ದ್ವಿತೀಯ ಪಿಯುಸಿ' ಮತ್ತು 'SSLC' ಪರೀಕ್ಷೆಗೆ ಸಮಯ ನಿಗದಿಪಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

‘ದ್ವಿತೀಯ ಪಿಯುಸಿ’ ಮತ್ತು ‘SSLC’ ಪರೀಕ್ಷೆಗೆ ಸಮಯ ನಿಗದಿಪಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

spot_img
- Advertisement -
- Advertisement -

ಬೆಂಗಳೂರು : ನಾಳೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಮೇ 2 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದೆ ಹಾಗೂ ಜೂನ್ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದೆ. ನಾಳೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇನ್ನೂ, ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಠ್ಯ ಕಡಿತದ ಬಗ್ಗೆ ನಾಳೆ ಮಾಹಿತಿ ನೀಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ 6 ದಿನಗಳ ಹಿಂದೆ ಜನವರಿ 1 ರಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಿವೆ. ಸಕಾಲದಲ್ಲಿ ಬೋರ್ಡ್‌ ಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಮಂಡಳಿಗೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!