Thursday, June 4, 2026
HomeಕರಾವಳಿSSLC ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನಲೆಯಲ್ಲಿ ಪೊಳಲಿಯಲ್ಲಿ ಸಚಿವ ಸುರೇಶ್ ಕುಮಾರ್ ರಿಂದ ಪ್ರಾರ್ಥನೆ

SSLC ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನಲೆಯಲ್ಲಿ ಪೊಳಲಿಯಲ್ಲಿ ಸಚಿವ ಸುರೇಶ್ ಕುಮಾರ್ ರಿಂದ ಪ್ರಾರ್ಥನೆ

- Advertisement -
- Advertisement -

ಬಂಟ್ವಾಳ: ಕೊರೋನಾ ಲಾಕ್ ಡೌನ್ ನೀತಿ ಸಂಹಿತೆ ಜಾರಿ ಆದ ಕಾರಣ ಮುಂದೂಡಲಾಗಿದ್ದ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ SSLC ಪರೀಕ್ಷೆಯನ್ನು ಕಳೆದ ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲಾಗಿತ್ತು.

ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಾಳೆ (ಜು. 10ರಂದು) ರಾಜ್ಯದ ಜನಪ್ರಿಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಈ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಸುರೇಶ್ ಕುಮಾರ್ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.

- Advertisement -

Latest News

error: Content is protected !!