Monday, June 8, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಚಾರ್ಮಾಡಿ ಮತ್ತೂರು ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ವಿ ಸೋಮಣ್ಣ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಚಾರ್ಮಾಡಿ ಮತ್ತೂರು ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ವಿ ಸೋಮಣ್ಣ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿರುವ ಕರ್ನಾಟಕ ಸರಕಾರದ ವಸತಿ ಸಚಿವ ವಿ ಸೋಮಣ್ಣ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ನಂತರ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸುರೇಂದ್ರ ಕುಮಾರ್ ಧರ್ಮಸ್ಥಳ ಹಾಗು ಅನೇಕ ಗಣ್ಯರು ಉಪಸ್ಥಿತರಿದ್ದರು.

ಚಾರ್ಮಾಡಿ ಮತ್ತೂರು ಕ್ಷೇತ್ರಕ್ಕೂ ಭೇಟಿ
ಇದಕ್ಕೂ ಮೊದಲು ವಿ ಸೋಮಣ್ಣರ ಕುಟುಂಬವನ್ನು ಚಾರ್ಮಾಡಿಯ ಶ್ರೀ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನಕ್ಕೂ ಕರೆದುಕೊಂಡು ಹೋದ ಶಾಸಕ ಹರೀಶ್ ಪೂಂಜ, ದೇವಸ್ಥಾನದ ಐತಿಹ್ಯವನ್ನು ಸಚಿವರಿಗೆ ವಿವರಿಸಿ ವಿಶೇಷ ಪೂಜೆ ಸಲ್ಲಿಸಿದರು.

- Advertisement -

Latest News

error: Content is protected !!