Wednesday, June 24, 2026
Homeಕರಾವಳಿಮಂಗಳೂರುಬಿಸಿಲೆಘಾಟ್ ನಲ್ಲಿ ಮಿನಿ ಬಸ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬಿಸಿಲೆಘಾಟ್ ನಲ್ಲಿ ಮಿನಿ ಬಸ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಸುಬ್ರಮಣ್ಯ; ಬಿಸಿಲೆಘಾಟ್ ನಲ್ಲಿ ಮಿನಿ ಬಸ್ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಕಲೇಶಪುರದ ಒಣಗೂರು ನಿವಾಸಿ ಶಿವರಾಜ್ (58) ಮೃತರು.

ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಜನರಿದ್ದ ವ್ಯಾನ್ ಬಿಸ್ಲೆ ಘಾಟ್ ಡಬಲ್ ಟರ್ನ್ ನಲ್ಲಿ 20 ಅಡಿ ಎತ್ತರದಿಂದ ಮಗುಚಿ ಬಿದಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿತ್ತು, ಅದರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿತ್ತು. ಇದೀಗ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಗಾಯಾಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡಿದ್ದ ಹಲವರು ಮಂಗಳೂರು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!