Monday, June 8, 2026
HomeUncategorizedತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ : ಸಚಿವ ಲಿಂಬಾವಳಿ

ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ : ಸಚಿವ ಲಿಂಬಾವಳಿ

- Advertisement -
- Advertisement -

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಲು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಮಂಗಳೂರಿನ ಪಿಲಿಕುಳ ನಿಸರ್ಗ ಧಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಕೇಂದ್ರ ಸರ್ಕಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಗೊಳಿಸಲು ಸೂಕ್ತ ಕ್ರಮದಲ್ಲಿ ಪರಿಶೀಲಿಸಿ ಕಳುಹಿಸುವಂತೆ ನಿರ್ದೇಶನ ನೀಡಿದ್ದು, ಕೆಲವು ದಿನಗಳ ಹಿಂದೆ ಈ ಕುರಿತಂತೆ ಸಭೆಯನ್ನು ನಡೆಸಿದ್ದೇವೆ. ಸೂಕ್ತವಾದ ಪ್ರಕ್ರಿಯೆಯಲ್ಲಿ ಮತ್ತೋಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಹಾಗೂ ಕೂಡಲೇ ಒಪ್ಪಿಗೆಯೂ ದೊರೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!