Thursday, June 4, 2026
Homeಕರಾವಳಿಉಡುಪಿಎರಡನೇ ದಿನವೂ ಉಡುಪಿ ಜಿಲ್ಲೆಯಲ್ಲಿ ಸಚಿವ ಅಶೋಕ್ ಪ್ರವಾಸ

ಎರಡನೇ ದಿನವೂ ಉಡುಪಿ ಜಿಲ್ಲೆಯಲ್ಲಿ ಸಚಿವ ಅಶೋಕ್ ಪ್ರವಾಸ

- Advertisement -
- Advertisement -

ಉಡುಪಿ: ಕಂದಾಯ ಸಚಿವ ಆರ್. ಅಶೋಕ್ ಉಡುಪಿ ಜಿಲ್ಲೆಯಲ್ಲಿ ಎರಡನೇ ದಿನದ ಪ್ರವಾಸ ಮುಂದುವರಿಸಿದ್ದಾರೆ. ಇಂದು ಆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ಮಕ್ಕಳೊಂದಿಗೆ ಪ್ರಾರ್ಥನೆಯಲ್ಲಿ ಭಾಗಿಯಾಗಿ, ಬೆಳಗಿನ ಉಪಾಹಾರ ಬಡಿಸಿದರು. ನಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಿಗ್ಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅಹವಾಲು ಸ್ವೀಕರಿಸಿದರು.

ಬಳಿಕ ಸುಕ್ಕೂರು-ಕಲ್ಗೋಳಿ ಮತ್ತು ವಡ್ಡಂಬೆಟ್ಟು-ಗರಡಿ ಮಾರ್ಗವಾಗಿ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಸಚಿವರು ಉದ್ಘಾಟನೆ ಮಾಡಿದರು.‌ ನಂತರ ಕಲ್ಲುಗುಡ್ಡೆ ಕೊರಗರ ಕಾಲನಿಗೆ ಭೇಟಿ ನೀಡಿದ ಸಚಿವ ಅಶೋಕ್, ಕುಮಾರ ಕೊರಗ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸೇವನೆ ಮಾಡಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್,‌ಜಿಲ್ಲಾ ಪಂಚಾಯತ್ ಸಿಇಒ ಡಾ. ನವೀನ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!