Thursday, June 4, 2026
HomeUncategorizedಮಂಗಳೂರು ಉದ್ಯೋಗ ಮೇಳಕ್ಕೆ ಸಚಿವ ಡಾ. ಅಶ್ವಥ್ ನಾರಾಯಣ ಚಾಲನೆ

ಮಂಗಳೂರು ಉದ್ಯೋಗ ಮೇಳಕ್ಕೆ ಸಚಿವ ಡಾ. ಅಶ್ವಥ್ ನಾರಾಯಣ ಚಾಲನೆ

- Advertisement -
- Advertisement -

ಮಂಗಳೂರು: ಮಂಗಳೂರು ಉದ್ಯೋಗ‌‌ ಮೇಳಕ್ಕೆ ಕೌಶಲ್ಯಾಭಿವೃದ್ಧಿ ‌ಮತ್ತು ಜೀವನೋಪಾಯ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಚಾಲನೆ ನೀಡಿದರು.

ಕೊಟ್ಟಾರ ಚೌಕಿಯಲ್ಲಿರುವ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿತ್ತು. ‌ಕರ್ನಾಟಕ ಕೌಶಲ್ಯಾಭಿವೃದ್ಧಿ ‌ನಿಗಮ ಉದ್ಯೋಗ ಮೇಳವನ್ನು ಆಯೋಜಿಸಿತ್ತು.

ಸಂಸದ ನಳೀನಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಡಿ, ವೇದವ್ಯಾಸ ಭಟ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್‌ಗೌಡ ಸೇರಿದಂತೆ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

5000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳ ನಿರೀಕ್ಷೆಗಳೊಂದಿಗೆ ಒಂದು ದಿನದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!