Monday, June 8, 2026
Homeತಾಜಾ ಸುದ್ದಿಉರಿಗೌಡ ನಂಜೇಗೌಡ ಚಲನಚಿತ್ರಕ್ಕೆ ನಾನು ಚಿತ್ರಕಥೆ ಬರೆಯುತ್ತಿಲ್ಲ:ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟೀಕರಣ

ಉರಿಗೌಡ ನಂಜೇಗೌಡ ಚಲನಚಿತ್ರಕ್ಕೆ ನಾನು ಚಿತ್ರಕಥೆ ಬರೆಯುತ್ತಿಲ್ಲ:ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟೀಕರಣ

- Advertisement -
- Advertisement -

ಬೆಂಗಳೂರು: ಸಚಿವ ಮುನಿರತ್ನ ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಅಶ್ವಥ್ ನಾರಾಯಣ ಚಲನಚಿತ್ರಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ಟಿಪ್ಪು ಸುಲ್ತಾನ್ ನನ್ನು ಕೊಂದ ವೀರ ಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ ಎಂದು ಹೇಳಿದ್ದು, ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಚಿವ ಮುನಿರತ್ನ ನಿರ್ಮಾಣದ ಉರಿಗೌಡ ನಂಜೇಗೌಡ ಚಲನಚಿತ್ರದ ಪೋಸ್ಟರ್ ನಲ್ಲಿ ಚಿತ್ರಕಥೆ ಸಚಿವ ಡಾ. ಅಶ್ವಥ್ ನಾರಾಯಣ ಅವರದ್ದು ಎಂದು ಉಲ್ಲೇಖಿಸಲಾಗಿತ್ತು.

- Advertisement -

Latest News

error: Content is protected !!