Saturday, May 25, 2024
Homeತಾಜಾ ಸುದ್ದಿಮಾರ್ಚ್ ಒಂದರಿಂದ ಎಲ್ಲಾ ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ

ಮಾರ್ಚ್ ಒಂದರಿಂದ ಎಲ್ಲಾ ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿವಿಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲವು ವಿವಿಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಎಚ್ಚರಿಸಿದ್ದಾರೆ.

ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿವಿಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲೋದ್ದೇಶವೇ ವಿಫಲವಾದಂತಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೊತೆಗೆ, ಎನ್ಇಪಿ ಅನುಸಾರ ವಿವಿಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ, ಇ-ಆಫೀಸ್ ಬಳಕೆಗೆ ವಿವಿಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಸಚಿವ ಡಾ. ಅಶ್ವಥ್ ನಾರಾಯಣ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!