Thursday, June 4, 2026
Homeಕರಾವಳಿಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಹಾಗೂ ಸಿರಿಧಾನ್ಯ ವಾಣಿಜ್ಯ ಮೇಳಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಹ್ವಾನಿಸಿದರು.

ಇಂದು ಬೆಳಗ್ಗೆ ಡಾ. ವೀರೇಂದ್ರ ಹೆಗಡೆ ರವರನ್ನು ಬೆಂಗಳೂರು ನಿವಾಸದಲ್ಲಿ ಭೇಟಿ ಮಾಡಿದ ಸಚಿವ ಪಾಟೀಲ್ ಮೇಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು‌.

ಜನವರಿ 20ರಿಂದ 22ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದೆ.

ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳಿಗೆ ಮಾರುಕಟ್ಟೆ ಒದಗಿಸುವ ಮತ್ತು ಗ್ರಾಹಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆಯಿಂದ ಅಂತರಾಷ್ಟ್ರೀಯ ಮೇಳ‌ ಆಯೋಜಿಸಲಾಗುತ್ತಿದೆ.

- Advertisement -

Latest News

error: Content is protected !!