Friday, June 27, 2025
Homeಕರಾವಳಿವೀಡಿಯೋ ಕಾನ್ಫರೆನ್ಸ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಳೆ ಪರಿಸ್ಥಿತಿ ಪರಾಮರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವ...

ವೀಡಿಯೋ ಕಾನ್ಫರೆನ್ಸ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಳೆ ಪರಿಸ್ಥಿತಿ ಪರಾಮರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಜಿಲ್ಲೆಯ ಮಳೆ ಹಾನಿ ಪರಿಸ್ಥಿತಿಯನ್ನು ಪರಾಮರ್ಶೆ ನಡೆಸಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿನ ಕಾರ್ಯಾಚರಣೆಗೆ ತುರ್ತು ಸ್ಪಂದನಾ ಪಡೆ ಸದಾ ಸನ್ನದ್ಧ ವಾಗಿರಬೇಕು. ಮುಳುಗಡೆ ಪ್ರದೇಶದ ನಿವಾಸಿಗಳನ್ನು ಆದ್ಯತೆಯಲ್ಲಿ ಸ್ಥಳಾಂತರಿಸಬೇಕು ಎಂದು ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ನದಿ ಪಾತ್ರ ಹಾಗೂ ಕಡಲಕೊರತೆ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆಗೆ ಸುಸಜ್ಜಿತ ತಂಡ ಇಡಬೇಕು. ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದರೆ, ಶೀಘ್ರವಾಗಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದ ಪ್ರಕರಣಗಳಲ್ಲಿ ಕೂಡಲೇ ಕ್ರಮ ಕೈಗೊಂಡು ವಿದ್ಯುತ್ ಪುನರ್ ಸ್ಥಾಪಿಸಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿದ ಸಚಿವರು,
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪರಿಸ್ಥಿತಿ ಬಗ್ಗೆ ನೆರೆಯ ಜಿಲ್ಲೆಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯತೆಯಿಂದ ಕಾರ್ಯಾಚರಿಸುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರ ನೀಡಿದರು.

- Advertisement -
spot_img

Latest News

error: Content is protected !!