Wednesday, June 24, 2026
HomeUncategorizedಬಾಂಗ್ಲಾ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ ವಹಿಸಲಿ; ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ...

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ ವಹಿಸಲಿ; ಮಂಗಳೂರಿನಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

- Advertisement -
- Advertisement -

ಮಂಗಳೂರು: ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮವಹಿಸಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಷಣ ಮಾಡಿದ ದಿನೇಶ್ ಗುಂಡೂರಾವ್, ಬಾಂಗ್ಲಾದೇಶದಲ್ಲಿ ಇತ್ತಿಚೆಗೆ ನಡೆದ ಘಟನೆಗಳ ಕುರಿತು ಆತಂಕ ವ್ಯಕ್ತಪಡಿಸಿದರು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಸಚಿವ ದಿನೇಶ್ ಗುಂಡೂರಾವ್, ಭಾರತ ಸೇರಿದಂತೆ ಜಗತ್ತಿನಾದ್ಯಂತ ಅಲ್ಪಸಂಖ್ಯಾತರ ರಕ್ಷಣೆ ಬಹುಸಂಖ್ಯಾತರ ಕರ್ತವ್ಯವಾಗಿದೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪೂರಕವಾಗಿ ಸ್ಪಂದಿಸುತ್ತಾ ಬಂದಿದೆ ಎಂದು ಭಾಷಣದಲ್ಲಿ ಹೇಳಿದ ಸಚಿವರು,
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 130 ಕೋಟಿ ಅನುದಾನ ಒದಗಿಸಲಾಗಿದ್ದು, 320 ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ 2000 ಕೋಟಿ ಅನುದಾನ ಒದಗಿಸಲು ನಿಶ್ಚಯಿಸಲಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಗೆ 200 ಕೋಟಿ ಅನುದಾನ ಹರಿದುಬರಲಿದೆ ಎಂದೂ ಜಿಲ್ಲಾ ಉಸ್ತುವಾರಿ ಸಚಿವರು ಈ ಸಂಧರ್ಭದಲ್ಲಿ ತಿಳಿಸಿದ್ದಾರೆ.

ಅಲ್ಲದೇ, ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ನೆರೆ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದ್ದು, 1.21 ಕೋಟಿ ರೂಪಾಯಿ ಪರಿಹಾರ ಪಾವತಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

Latest News

error: Content is protected !!