Friday, June 27, 2025
Homeಕರಾವಳಿಮಂಗಳೂರುಮಂಗಳೂರು: ನೆರೆ ಹಾವಳಿ ಪ್ರದೇಶಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ನೆರೆ ಹಾವಳಿ ಪ್ರದೇಶಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

spot_img
- Advertisement -
- Advertisement -

ಮಂಗಳೂರು: ಭಾರೀ ಮಳೆಯಿಂದಾಗಿ ಮುಳುಗಡೆಯಾಗಿರುವ ಸ್ಥಳಗಳಿಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ದಿನೇಶ್ ಗುಂಡೂರಾವ್, ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸ್ಥಳೀಯ ನಿವಾಸಿಗಳ ಜೊತೆ ಸಚಿವರ ಜೊತೆ ಚರ್ಚೆ ನಡೆಸಿದರು.

ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಈ ವೇಳೆ ಸಚಿವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ತೋಟ ಮತ್ತು ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಫಲ್ಗುಣಿ ನದಿ ನೆರೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್, ಪ್ರವಾಹ ಬಂದಿರುವ ಸಂದರ್ಭದಲ್ಲಿಯೇ ತಂತ್ರಜ್ಞರನ್ನು ಸ್ಥಳಕ್ಕೆ ಕರೆತಂದು ಸಲಹೆ ಪಡೆಯಿರಿ ಎಂದು ನಿರ್ದೇಶನ ನೀಡಿದ್ದಾರೆ.

- Advertisement -
spot_img

Latest News

error: Content is protected !!