Saturday, June 6, 2026
Homeಕರಾವಳಿಶ್ರೀಕೇತ್ರ ಧರ್ಮಸ್ಥಳಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶ್ರೀಕೇತ್ರ ಧರ್ಮಸ್ಥಳಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

- Advertisement -
- Advertisement -

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಸಚಿವರು ಇಂದು ಬೆಳಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ದೇವರ ದರ್ಶನ ಪಡೆದಿದ್ದಾರೆ.

ಇಂದು ಕನ್ಯಾಡಿಯ ರಾಮ ಮಂದಿರಕ್ಕೆ ಭೇಟಿ ನೀಡಲಿರುವ ದಿನೇಶ್ ಗುಂಡೂರಾವ್ ನಂತರ ಉಜಿರೆಯಲ್ಲಿ ಎಸ್ ಡಿಎಂ ಯೋಗ ಮತ್ತು ಪ್ರಕೃತಿ ವಿಜ್ಞಾನಗಳ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.ಮಧ್ಯಾಹ್ನ ಉಜಿರೆಯ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಸಚಿವರು ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಮತ್ತು ಜನತಾ ದರ್ಶನ ನಡೆಸಲಿದ್ದಾರೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ವೇಳೆ ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.

- Advertisement -

Latest News

error: Content is protected !!