Thursday, September 17, 2026
Homeಕರಾವಳಿತಣ್ಣೀರುಬಾವಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ತಣ್ಣೀರುಬಾವಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

- Advertisement -
- Advertisement -

ಮಂಗಳೂರು: ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪರಿಸರ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸ್ವಚ್ಛ ಹಾಗೂ ನೈರ್ಮಲ್ಯಯುತ ವಾತಾವರಣ ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಪ್ರವಾಸೋದ್ಯಮದ ಬೆಳವಣಿಗೆಗೆ ಹಾಗೂ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದರು.

ನಗರ ಪ್ರದೇಶಗಳ ಪ್ರಮುಖ ಸ್ಥಳಗಳ ಸೌಂದರ್ಯೀಕರಣ, ಸಾರ್ವಜನಿಕ ಸ್ಥಳಗಳ ನೈರ್ಮಲ್ಯ ಕಾಪಾಡುವುದು ಹಾಗೂ ತ್ಯಾಜ್ಯ ವಿಂಗಡಣೆಗೆ ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಸ್ವಚ್ಛತೆಯನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಜನಾಂದೋಲನವಾಗಿ ರೂಪಿಸಬೇಕು ಎಂದು ಸಚಿವರು ಕರೆ ನೀಡಿದರು.

ಅಭಿಯಾನದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಸಾಮೂಹಿಕವಾಗಿ ‘ಸ್ವಚ್ಛತಾ ಪ್ರತಿಜ್ಞೆ’ ಸ್ವೀಕರಿಸಿದರು. ಬಳಿಕ ತಣ್ಣೀರುಬಾವಿ ಬೀಚ್ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಆಯುಕ್ತ ರಾಹುಲ್ ರತ್ನಂ ಪಾಂಡೆ, ಪೌರಕಾರ್ಮಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯುವಜನರು ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನಕ್ಕೆ ಕೈಜೋಡಿಸಿದರು.

- Advertisement -

Latest News

error: Content is protected !!