Saturday, June 13, 2026
Homeತಾಜಾ ಸುದ್ದಿಸಂತೋಷ್ ಪಾಟೀಲ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

- Advertisement -
- Advertisement -

ಮೈಸೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಸಿದ್ದು, ಗುತ್ತಿಗೆದಾರ ಸಂತೋಷ್ ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ .ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಸಂತೋಷ್ ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದರು.

ಆ ಕಾಪಿಯನ್ನು ನಾನು ತೆಗೆದುಕೊಂಡು ಗುತ್ತಿಗೆದಾರ ಸಂತೋಷ್ ವಿರುದ್ಧ ಕೋರ್ಟ್‍ನಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ. ಕೋರ್ಟ್‍ನಿಂದ ನೋಟಿಸ್ ಹೋದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಟಿಸ್ ಹೋದ ನಂತರ ಗಾಬರಿಯಾಗಿದ್ದಾರೆ ಅನಿಸುತ್ತೆ. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು. ಇಂದು ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!