Thursday, June 4, 2026
HomeUncategorizedಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ

- Advertisement -
- Advertisement -

ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಶ್ರೀ‌ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.‌ ಇಂದು ಬೆಳಗ್ಗೆ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಕೂಡಾ ಸಚಿವ ಈಶ್ವರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ವೇಳೆ ಸಚಿವ ಈಶ್ವರಪ್ಪ ಪತ್ನಿ ಜಯಲಕ್ಷ್ಮಿ, ಪುತ್ರ ಕಾಂತೇಶ್ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.

- Advertisement -

Latest News

error: Content is protected !!