- Advertisement -
- Advertisement -
ಉಡುಪಿ: ಪಡುಬಿದ್ರಿ ವ್ಯಾಪ್ತಿಯಲ್ಲಿ ಉಂಟಾಗಿರುವ ಕಡಲ್ಕೊರೆತ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು, ಈ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರಿ ಮಟ್ಟದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕಡಲ್ಕೊರೆತದಿಂದ ಸ್ಥಳೀಯರ ಜೀವನೋಪಾಯ ಹಾಗೂ ಕರಾವಳಿ ಪ್ರವಾಸೋದ್ಯಮಕ್ಕೆ ಧಕ್ಕೆಯಾಗುವ ಆತಂಕವಿದ್ದು, ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರುವುದಾಗಿ ತಿಳಿಸಿದರು. ಇನ್ನು ಕಡಲತೀರಗಳಲ್ಲಿ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಿಸುವುದಾಗಲಿ ಅಥವಾ ಸರ್ಕಾರಿ ಜಾಗವನ್ನು ಅತಿಕ್ರಮಿಸುವುದಾಗಲಿ ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಇಲಾಖಾಧಿಕಾರಿಗಳು ಹಾಜರಿದ್ದರು.
- Advertisement -


