Saturday, June 27, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಕೆ.ಜೆ. ಜಾರ್ಜ್ ಚುನಾವಣಾ ಸಭೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಕೆ.ಜೆ. ಜಾರ್ಜ್ ಚುನಾವಣಾ ಸಭೆ

- Advertisement -
- Advertisement -

ಉಡುಪಿ: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದರು.

ಉಡುಪಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಮತ್ತು ಅಭ್ಯರ್ಥಿಗಳ ಜೊತೆ ನಡೆದ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತು ಮಾಜಿ‌ ಎಂಎಲ್ಸಿ ಐವನ್ ಡಿಸೋಜ ಭಾಗವಹಿಸಿದ್ದರು.

ಅಲ್ಲದೇ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗಡೆ, ಉಡುಪಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಭೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ, ಉಡುಪಿ ಜಿಲ್ಲೆಯ ವಿವಿಧ ಸಮುದಾಯಗಳಾದ ಕುಂಬಾರ, ಸವಿತಾ ಸಮಾಜ, ವಿಶ್ವಕರ್ಮ ಸಮಾಜ, ಬ್ರಾಹ್ಮಣ, ಗಾಣಿಗ, ಮಡಿವಾಳ, ಶೆಟ್ಟಿಗಾರ, ಆರ್.ಎಸ್.ಬಿ, ಮೊಗವೀರ, ದೇವಾಡಿಗ, ಜಿಎಸ್ ಬಿ, ಪರಿಶಿಷ್ಟ ಪಂಗಡ ಮತ್ತು‌ ಪರಿಶಿಷ್ಟ ಜಾತಿಯ ಮುಖಂಡರುಗಳ ಜೊತೆ ಕೂಡಾ ಸಭೆ ನಡೆಯಿತು.

- Advertisement -

Latest News

error: Content is protected !!