Saturday, May 18, 2024
Homeತಾಜಾ ಸುದ್ದಿಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆರ್ ಎಸ್ ಎಸ್ ಪ್ರಶಿಕ್ಷಣ ಶಿಬಿರಕ್ಕೆ ಅನುಮತಿ ಕೊಟ್ಟಿಲ್ಲ; ಎಸ್...

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆರ್ ಎಸ್ ಎಸ್ ಪ್ರಶಿಕ್ಷಣ ಶಿಬಿರಕ್ಕೆ ಅನುಮತಿ ಕೊಟ್ಟಿಲ್ಲ; ಎಸ್ ಎಫ್ ಐ ಆರೋಪ ತಳ್ಳಿ ಹಾಕಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

spot_img
- Advertisement -
- Advertisement -

ಕಾರವಾರ: ದಸರಾ ಸಮಯದಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ಕೊಡುತ್ತೇವೆ, ರಜೆ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಎನ್ ಎಸ್ ಎಸ್ ಸೇರಿದಂತೆ ಎಲ್ಲರೂ ಕೂಡಾ ವಸತಿ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕೇಳುತ್ತಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆರ್ ಎಸ್ ಎಸ್ ಪ್ರಶಿಕ್ಷಣ ಶಿಬಿರ ಆಯೋಜನೆಗೆ ಎಸ್ ಎಫ್ ಐ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಹೇಳಿಕೆ ನೀಡಿದ್ದಾರೆ.

ಕಾರವಾರದಲ್ಲಿ ಇಂದು ಪ್ರತಿಕ್ರಿಯಿಸಿದ ಸಚಿವರು,
ರಾಷ್ಟ್ರೀಯತೆಗೆ ಸಂಬಂಧಿಸಿದಂತೆ ಯಾವುದೇ ಉತ್ತಮ ಸಂದೇಶ ಕೊಡುವ ಯಾವುದೇ ಸಂಸ್ಥೆಗಳಿದ್ದರೂ ಅನುಮತಿ ಕೊಡುತ್ತೇವೆ,
ನಿಷೇಧಿತ ಯಾವುದೇ ಸಂಸ್ಥೆಗಳಿಗೆ ಅನುಮತಿ ನೀಡುವುದಿಲ್ಲ, ಆರ್ ಎಸ್ ಎಸ್ ಸಂಘಟನೆಗೆ ನಾವು ಅವಕಾಶ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ದೇಶ ಮೊದಲು ಎನ್ನುವ ಯಾವುದೇ ಸಂಸ್ಥೆಗೆ ಅವಕಾಶ ಕೊಡುತ್ತೆವೆ, ಇದು ಮೊದಲಿನಿಂದಲೂ ವಾಡಿಕೆ, ಟೀಕೆ ಮಾಡುವವರು ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದು ಟೀಕೆ ಮಾಡಲಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!